ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಉಗ್ರರ ಹತ್ಯೆಗೈದ ಭದ್ರತಾ ಪಡೆ

ಶ್ರೀನಗರ, ಡಿಸೆಂಬರ್ 30:ದಕ್ಷಿಣ ಕಾಶ್ಮೀರದಲ್ಲಿ ಬುಧವಾರ ಸಂಜೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಪಾಕಿಸ್ತಾನದ ಇಬ್ಬರು ಸೇರಿದಂತೆ ಆರು ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರರನ್ನು ಹತ್ಯೆ ಮಾಡಲಾಗಿದೆ. ಅವಳಿ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಮತ್ತು ಇಬ್ಬರು ಸೈನಿಕರು ಕೂಡ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತರಾದ ಆರು ಉಗ್ರರ ಪೈಕಿ ನಾಲ್ವರನ್ನು ಗುರುತಿಸಲಾಗಿದೆ ಎರಡು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ನಿμÉೀಧಿತ ಭಯೋತ್ಪಾದಕ ಸಂಘಟನೆಯ ಆರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಯಿತು. ಹತರಾದ ಭಯೋತ್ಪಾದಕರ ಪೈಕಿ ನಾಲ್ವರನ್ನು ಇದುವರೆಗೆ ಇಬ್ಬರು ಪಾಕಿಸ್ತಾನಿ ಮತ್ತು ಇಬ್ಬರು ಸ್ಥಳೀಯ ಭಯೋತ್ಪಾದಕರು ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಕಾಶ್ಮೀರ ವಿಜಯ್ ಕುಮಾರ್ ಹೇಳಿದ್ದಾರೆ.

ಬುಧವಾರ ಸಂಜೆ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿ ಪಡೆದ ಜೆ-ಕೆ ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಜಂಟಿ ತಂಡವು ದಕ್ಷಿಣ ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ದೂರು ಶಹಾಬಾದ್‍ನಲ್ಲಿರುವ ನೌಗಾಮ್ ಗ್ರಾಮವನ್ನು ಸುತ್ತುವರೆದಿತ್ತು.

ಪಡೆಗಳ ಜಂಟಿ ತಂಡ ಬಿಗಿ ಬಂದೋಬಸ್ತ್ ಮಾಡುತ್ತಿದ್ದಂತೆ ಗ್ರಾಮದಲ್ಲಿ ಅಡಗಿದ್ದ ಉಗ್ರರು, ಭದ್ರತಾ ಪಡೆಯ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದರು. ಆಗ ಉಗ್ರರು ಮತ್ತು ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆಯಿತು ಮೂವರು ಉಗ್ರರ ಹತ್ಯೆಯೊಂದಿಗೆ ಗುಂಡಿನ ಚಕಮಕಿ ಕೊನೆಗೊಂಡಿತು. ಉಗ್ರರ ಆರಂಭಿಕ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಹಾಗೂ ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ನೌಗಾಮ್‍ನಲ್ಲಿ ಗುಂಡಿನ ಚಕಮಕಿ ನಡೆಯುತ್ತಿರುವಾಗ, ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಪಡೆಗಳ ಜಂಟಿ ತಂಡದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಪಡೆಗಳು ಗುಂಡಿನ ದಾಳಿ ನಡೆಸಿದ ನಂತರ ಮೂವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!