ಫೆ.26 ರಂದು ತುಮಕೂರು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ


ತುಮಕೂರು : ತುಮಕೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣಾ ಪ್ರಕ್ರಿಯೆಯು ಫೆಬ್ರವರಿ 26 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ಅವರು ತಿಳಿಸಿದ್ದಾರೆ.

ತುಮಕೂರು ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.

ಫೆಬ್ರವರಿ 26 ರಂದು ಬೆಳಿಗ್ಗೆ 11 ಗಂಟೆಯಿಂದ ಸದಸ್ಯರ ಹಾಜರಾತಿ ಪಡೆದ ನಂತರ ಮೇಯರ್ ಸ್ಥಾನದ ಚುನಾವಣೆ ಪ್ರಾರಂಭಿಸಲಾಗುವುದು. ನಂತರ ಉಪಮೇಯರ್ ಸ್ಥಾನದ ಚುನಾವಣೆ ನಂತರ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಸದಸ್ಯರ ಸ್ಥಾನಕ್ಕೆ ಚುನಾವಣೆ ನಂತರ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸದಸ್ಯರ ಸ್ಥಾನಕ್ಕೆ ತದನಂತರ ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ ಸದಸ್ಯರ ಸ್ಥಾನಕ್ಕೆ, ಕೊನೆಯದಾಗಿ ಲೆಕ್ಕಪತ್ರ ಸ್ಥಾಯಿ ಸದಸ್ಯರ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

error: Content is protected !!