ವಿರಾಟ್ ಕೋಹ್ಲಿಗೆ 10 ಕೋಟಿ ಅಭಿಮಾನಿಗಳು

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇನ್ ಸ್ಟಾಗ್ರಾಮ್ ನಲ್ಲಿ 10 ಕೋಟಿ ಜನ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಈ ಮೂಲಕ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಮೊದಲ ಭಾರತೀಯ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ.

ಇನ್ ಸ್ಟಾಗ್ರಾಮ್ ನಲ್ಲಿ 10 ಕೋಟಿ ದಾಟಿದ್ದು, ಈ ಸಾಧನೆ ಮಾಡಿದ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಕೂಡ ಇವರಾಗಿದ್ದಾರೆ. ಹೀಗಾಗಿ ಐಸಿಸಿ ಕೊಹ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದೆ.

ಈ ಪಟ್ಟಿಯಲ್ಲಿ ಪೋರ್ಚುಗಲ್ ನ ಕ್ರಿಶ್ಚಿಯಾನೊ ರೊನಾಲ್ಡೋ (26.6) ಕೋಟಿ, ಅರ್ಜೆಂಟೀನಾದ ಲಿಯೊನಲ್ ಮೆಸ್ಸಿ(18.7) ಕೋಟಿ, ಬ್ರೆಜಿಲ್ ನ ನೆಯ್ಮರ್(14.7) ಫಾಲೋವರ್ಸ್ ಹೊಂದಿದ್ದಾರೆ. ಇವರ ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ.

ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರು ಇನ್ ಸ್ಟಾಗ್ರಾಮ್ ನಲ್ಲಿ 60.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, 2ನೇ ಸ್ಥಾನದಲ್ಲಿ ಇದ್ದಾರೆ.

error: Content is protected !!