ತುಮಕೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಅವುಗಳ ನಿಯಂತ್ರಣಕ್ಕೆ ಪೂರಕವಾಗಿ 3 ಸಾವಿರ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ ತಿಳಿಸಿದ್ದಾರೆ.

ತುಮಕೂರು ಹೊರವಲಯದ ಅಜ್ಜೇಗೌಡನ ಹಳ್ಳಿಯಲ್ಲಿ ವಿಶೇಷ ಚಿಕಿತ್ಸಾ ಘಟಕವನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕೈಗೊಳ್ಳುವ ಮುನ್ನ ತೆಗೆದುಕೊಳ್ಳಬೇಕಾದಂತಹ ವೈದ್ಯಕೀಯ ಚಿಕಿತ್ಸಾ ಕ್ರಮಗಳಿಗೆ ಸಿದ್ಧತೆ ಅಗತ್ಯವಿದ್ದು, ಅದಕ್ಕಾಗಿ ವಿಶೇಷ ಸಿಬ್ಬಂದಿಯನ್ನು ಕೂಡ ನಿಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಹತ್ತು ದಿನಗಳ ಒಳಗಾಗಿ ಈ ಕ್ರಮವನ್ನು ಜಾರಿಗೆ ತರಲಾಗುವುದು. ಅಲ್ಲದೆ ಇತ್ತೀಚೆಗೆ ನಾಯಿ ಕಡಿತಕ್ಕೆ ಒಳಗಾಗಿದಂತಹ ಮಗುವಿನ ಆರೋಗ್ಯ ಚಿಕಿತ್ಸೆಯ ಕುರಿತಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಮಗುವಿಗೆ ಕಚ್ಚಿರುವ ನಾಯಿಗೆ ಯಾವುದೇ ರೀತಿಯ ರೇಬಿಸ್ ಕಾಯಿಲೆ ಇಲ್ಲ ಎಂಬುದನ್ನು ಕೂಡ ದೃಢಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ನಾಯಿಗಳನ್ನು ನಿಯಂತ್ರಿಸುವಂತೆ ಭಾರತ ಕಮಿನಿಸ್ಟ್ ವತಿಯಿಂದ ಪ್ರತಿಭಟನೆಯನ್ನ ಪಾಲಿಕೆ ಬಳಿ ಹಮ್ಮಿಕೊಳ್ಳಲಾಗಿತ್ತು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಶಿವಣ್ಣ ಇಂತಹ ಜನಪರ ಹೋರಾಟಕ್ಕೆ ನಾನು ಸದಾ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here