ತಿಪಟೂರು:  ಹಾಸ್ಟೆಲ್‌ ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 9 ಜನ ಮಕ್ಕಳು ವಾಂತಿ‌ ಭೇದಿ‌ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ತಿಪಟೂರು ನಗರದ ಹಾಲ್ಕುರಿಕೆ ರಸ್ತೆಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಘಟನೆ ನಡೆದಿದೆ. ಕಳೆದ ರಾತ್ರಿ ಆಹಾರ ಸೇವಿಸಿದ ಬಳಿಕ 9 ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವು‌‌ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮಕ್ಕಳನ್ನ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗಿದೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗಳ ಪೈಕಿ ಗಣೇಶ್, ಪಾರ್ಥ, ಪಂಪಣ್ಣ,ಮಹಂತೇಶ್,ವಿನಯ್,ಸುರೇಶ್, ಗಣೇಶ್, ಮನೋಜ್ ಎನ್ನುವ ವಿಧ್ಯಾರ್ಥಿಗಳು ಅಸ್ಪಸ್ಥಗೊಂಡಿದ್ದು, ತಕ್ಷಣ ಚಿಕಿತ್ಸೆಗಾಗಿ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೂಡಲೇ ಸ್ಥಳಕ್ಕೆ ತಿಪಟೂರು ಉಪವಿಭಾಗಾಧಿಕಾರಿ ಶ್ರೀಮತಿ ಸಪ್ತಶ್ರೀ ಶಾಸಕರ ಆಪ್ತ ಕಾರ್ಯದರ್ಶಿ ಶಿವಕುಮಾರ್ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕರಾದ ತ್ರಿವೇಣಿಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‌ತಾಲೂಕು ಆರೋಗ್ಯಾಧಿಕಾರಿ ಶ್ರೀಮತಿ ಡಾ// ರಾಧಿಕ, ಹಾಗೂ ಕೃಷ್ಣಮೂರ್ತಿ ನೇತೃತ್ವದ ತಂಡ ಹಾಸ್ಟೆಲ್ ಗೆ ಭೇಟಿ ನೀಡಿ, ವಿದ್ಯಾರ್ಥಿಗಳ ರಕ್ತದ ಮಾದರಿ ಹಾಗೂ ರಾತ್ರಿ ಹಾಸ್ಟೆಲ್ ನಲ್ಲಿ ತಯಾರಿಸಿದ ಆಹಾರದ ಮಾದರಿಗಳನ್ನ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ. ಪ್ರಯೋಗಾಲಯದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾತನಾಡಿ ತಿಪಟೂರು ನಗರದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಬಗ್ಗೆ ಮಾಹಿತಿ ದೊರೆತ ತಕ್ಷಣ , ವಾರ್ಡನ್ ಸುಧಾರಾಣಿ,  ಸಹಾಯಕ ನಿರ್ದೇಶಕರಾದ ತ್ರಿವೇಣಿ ಹಾಗೂ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ,ಯಾವುದೇ ಅಪಾಯವಿಲ್ಲದೆ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ, ಅಸ್ವಸ್ಥಗೊಂಡ ವಿದ್ಯಾರ್ಥಿಗಳು ಶಾಲೆಗಳಿಗೆ ರಜೆ ಇದ್ದ ಕಾರಣ ಹಾಸ್ಟೆಲ್ ಹೊರಗಡೆ ಊಟಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು , ಅಸ್ವಸ್ಥಗೊಂಡ ವಿದ್ಯಾರ್ಥಿಗಳ ರಕ್ತದ ಮಾದರಿ ಹಾಗೂ ಆಹಾರದ ಮಾದರಿಗಳನ್ನ ಪ್ರಯೋಗಾಲಯಕ್ಕೆ ಕಳಿಸಿದ್ದು ವರದಿ ಬಂದ ನಂತರ ಮುಂದಿನ ಕ್ರಮವಹಿಸಲಾಗುವುದು ಎಂದು ತಿಳಿಸಿದರು

LEAVE A REPLY

Please enter your comment!
Please enter your name here