ಕ್ಯಾಂಟರ್-ಬೈಕ್ ಅಪಘಾತ: ಯೋಧ ಸಾವು.

ತಿಪಟೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ನಡೆದ ಅಪಘಾತದಲ್ಲಿ ಯೋಧ ಸ್ಥಳದಲ್ಲೆ ಸಾವನ್ನಪ್ಪಿರುವ ದಾರುಣ ಘಟನೆ ತಾಲ್ಲೂಕಿನ ತಡಸೂರು ಗೇಟ್ ಬಳಿ ನಡೆದಿದೆ.

ಅರಸಿಕೆರೆ ತಾಲ್ಲೂಕು ಕೆಂಕೆರೆ ಗ್ರಾಮದ ಯೋಧ ಯೋಗೇಶ್ (24) ಮೃತ ದುರ್ದೈವಿ. ಜಮ್ಮು ಕಾಶ್ಮೀರ ಗಡಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಯೋಗೇಶ್  ಕಳೆದ ವಾರ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು.

ಇಂದು ಕೆಲಸ ನಿಮಿತ್ತ ತಿಪಟೂರಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ. ಯೋಗೇಶ್ ಅವರ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತ ಯೋಧನ ಶವವನ್ನ ತಿಪಟೂರು ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಸ್ಥಳಾಂತರಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!