ನಟ ಪುನೀತ್ ರಾಜ್ ಕುಮಾರ್ ಅಸ್ವಸ್ಥ ಆಸ್ಪತ್ರೆಗೆ ದಾಖಲು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಮ್ ನಲ್ಲಿ ಕಸರತ್ತು  ಮಾಡುವ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಮೇಲ್ನೋಟಕ್ಕೆ ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಾಲ್ಕು ಗಂಟೆಗಳ ಹಿಂದಷ್ಟೇ ಶಿವಣ್ಣ ಅಭಿಯನದ ಭಜರಂಗಿ-2 ಚಿತ್ರದ ಯಶಸ್ಸು ಕೋರಿ ಇಡೀ ಚಿತ್ರತಂಡಕ್ಕೆ ಪುನೀತ್ ರಾಜ್ ಕುಮಾರ್ ಶುಭ ಕೋರಿದರು. ನಂತರ ಅವರ ಆರೋಗ್ಯ ಸಮಸ್ಯೆ ಬಿಗಡಾಯಿಸಿದೆ.

ವಿಕ್ರಂ ಆಸ್ಪತ್ರೆಗೆ ಅಭಿಮಾನಿಗಳು ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ

error: Content is protected !!