ಬೆಂಗಳೂರು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ನಾಲ್ವರ ದುರ್ಮರಣ

ಬೆಂಗಳೂರು: ಬನ್ನೇರುಘಟ್ಟ-ತುಮಕೂರು ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಬನ್ನೇರುಘಟ್ಟದಿಂದ ತುಮಕೂರು ಕಡೆ ಹೊರಟ್ಟಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕುಮಾರಸ್ವಾಮಿ ಲೇಔಟ್ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ನೈಸ್ ರಸ್ತೆಯಲ್ಲಿ 8 ಕಿಮೀ ದೂರದವರೆಗೂ ವಾಹನಗಳು ಸಾಲಾಗಿ ನಿಂತಿವೆ.

ಕಾರಿನಲ್ಲಿದ್ದ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!