ಪ್ರಧಾನಿ ಭದ್ರತೆಯಲ್ಲಿ ಭಾರಿ ಲೋಪ! ಜೀವಂತವಾಗಿ ಮರಳಿದ್ದಕ್ಕೆ ಧನ್ಯವಾದ ಎಂದ ಮೋದಿ

ಚಂಡೀಗಢ: ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದ ವೇಳೆ ಭಾರೀ ಭದ್ರತಾ ಲೋಪವಾಗಿದೆ.

ಚುನಾವಣಾ ಸಮಯದಲ್ಲಿ ಕೇಂದ್ರ ಮತ್ತು ಕಾಂಗ್ರೆಸ್ ಆಡಳಿತದ ರಾಜ್ಯಗಳ ನಡುವೆ ಘರ್ಷಣೆಗೆ ಕಾರಣವಾದ ಭಾರೀ ಭದ್ರತಾ ಉಲ್ಲಂಘನೆಯಲ್ಲಿ ಪ್ರತಿಭಟನಾಕಾರರ ಕಾರಣದಿಂದ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಂಜಾಬ್‌ನಲ್ಲಿ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು.

ಉಲ್ಲಂಘನೆಯಿಂದಾಗಿ ಪ್ರಧಾನಿ ಮೋದಿ ಬಟಿಂಡಾದ ವಿಮಾನ ನಿಲ್ದಾಣಕ್ಕೆ ಮರಳಿದರು ಎಂದು ಗೃಹ ಸಚಿವಾಲಯ ತನ್ನ ಹೇಳಿಕೆಯಲ್ಲಿ ಪಂಜಾಬಿನ ಕಾಂಗ್ರೆಸ್ ಸರ್ಕಾರವನ್ನು ದೂಷಿಸಿದೆ. “ಪ್ರಧಾನಿ 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ” ಎಂದು ಗೃಹ ಸಚಿವಾಲಯ ಹೇಳಿದೆ.

ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫಿರೋಜ್‌ಪುರಕ್ಕೆ ತೆರಳಬೇಕಿತ್ತು. ಅವರು ತಮ್ಮ ನಿಗದಿತ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ವೇದಿಕೆಯಿಂದ ಘೋಷಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಯಾವುದೇ ಭಾರತೀಯ ಪ್ರಧಾನ ಮಂತ್ರಿಯ ಭದ್ರತೆಯಲ್ಲಿನ ಏಕೈಕ ದೊಡ್ಡ ಲೋಪ” ಎಂದು ಕರೆದ ಸರ್ಕಾರಿ ಮೂಲಗಳು ಪಂಜಾಬ್ ಪೊಲೀಸರು ರಸ್ತೆಗೆ ಅಡ್ಡವಾಗಿದ್ದವರನ್ನು ಪ್ರತಿಭಟನಾಕಾರರೆಂದು ಕರೆದ ರೀತಿಯನ್ನು ಟೀಕಿಸಿವೆ. ಪಂಜಾಬ್ ಪೊಲೀಸರಿಗೆ ಮಾತ್ರ ಪ್ರಧಾನಿಯವರ ನಿಖರವಾದ ಮಾರ್ಗ ತಿಳಿದಿತ್ತು ಎಂದು ಮೂಲಗಳು ತಿಳಿಸಿವೆ..

ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಅವರು ಸೂಕ್ತ ಹವಾಮಾನ ಕ್ಕಾಗಿ ಸುಮಾರು 20 ನಿಮಿಷಗಳ ಕಾಲ ಕಾದಿದ್ದರು..ಹವಾಮಾನ ಸುಧಾರಿಸದಿದ್ದಾಗ, ಅವರು ರಸ್ತೆಯ ಮೂಲಕ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಬೇಕೆಂದು ನಿರ್ಧರಿಸಲಾಯಿತು, ಇದರ ಬಗ್ಗೆ ಪಂಜಾಬ್ ಪೊಲೀಸರಿಗೆ ತಿಳಿಸಲಾಯಿತು. ಅವರು ಮಾರ್ಗದ ಸುರಕ್ಷತೆ ಬಗ್ಗೆ ತಿಳಿಸಿದ ನಂತರ ಪ್ರಯಾಣಿಸಲು ನಿರ್ಧರಿಸಲಾಯಿತು ಎಂದು ಹೇಳಲಾಗಿದೆ.

ಸ್ಮಾರಕದಿಂದ ಸುಮಾರು 30 ಕಿ.ಮೀ ದೂರದಲ್ಲಿ, ಪ್ರಧಾನಿ ಬೆಂಗಾವಲು ಪಡೆ ಮೇಲ್ಸೇತುವೆಯನ್ನು ತಲುಪಿದಾಗ, ಪ್ರತಿಭಟನಾಕಾರರು ರಸ್ತೆಯನ್ನು ತಡೆದಿದ್ದಾರೆ.ಪ್ರಧಾನಿಯವರ ವೇಳಾಪಟ್ಟಿ ಮತ್ತು ಪ್ರಯಾಣದ ಯೋಜನೆಯನ್ನು ಪಂಜಾಬ್ ಸರ್ಕಾರಕ್ಕೆ ಮುಂಚಿತವಾಗಿ ತಿಳಿಸಲಾಗಿದೆ. ಕಾರ್ಯವಿಧಾನದ ಪ್ರಕಾರ, ಅವರು ಆಂತರಿಕ ಭದ್ರತೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು. ಯೋಜನೆಯನ್ನು ಸಿದ್ಧಪಡಿಸಬೇಕು. ಆದರೆ ಅಲ್ಲಿನ ಭದ್ರತಾ ಲೋಪದ ಕಾರಣ ಬಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಲು ನಿರ್ಧರಿಸಲಾಯಿತು. ಎಂದು ಹೇಳಲಾಗಿದೆ.

ಘಟನೆಯ ಬಳಿಕ ಬಟಿಂಡಾ ವಿಮಾನ ನಿಲ್ದಾಣದ ಸಿಬ್ಬಂದಿ ಜೊತೆ ಮಾತನಾಡಿದ್ದ ಮೋದಿ, ನಾನು ಜೀವಂತವಾಗಿ ಬಂದಿದ್ದೇನೆ. ನಿಮ್ಮ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿ ಎಂದು ಪಂಜಾಬ್ ಸರ್ಕಾರಕ್ಕೆ ಮಾತಿನಲ್ಲೇ ಕುಟುಕಿದ್ದಾರೆ.

error: Content is protected !!