ತುಮಕೂರು : ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಪತ್ರಕರ್ತೆ ಸೇರಿ ಮೂರು ಮಂದಿ ಮಹಿಳೆಯರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.
ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಸನ್ ರೈಸರ್ಸ್ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿರುವ ಘಟನೆ ಬೆಳಗಿನ ಜಾವ 4.45 ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ದೆಹಲಿ ಮೂಲದ ಪತ್ರಕರ್ತೆ ಪೂರ್ವಿ, ಶುಬಾಳಿ ಸಿಂಗ್, ಪ್ರಿಯಾಂಕ ಎಂಬ ಮೂವರು ಮಹಿಳೆಯರು ಮೃತಪಟ್ಟಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನ ಕಳ್ಳಂಬೆಳ್ಳಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರನ್ನ ಸಿದ್ದಗಂಗಾ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಸ್ಥಳಕ್ಕೆ ಎಸ್ಪಿ ವೆಂಕಟ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಕಳ್ಳಂ ಬೆಳ್ಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.