ರಸ್ತೆಯಲ್ಲೇ ಹೊತ್ತಿ ಉರಿದ ಕಾರು!

ಶಿರಾ : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಏಕಾಏಕಿ ಹೊತ್ತಿ ಉರಿದ ಘಟನೆ ಶಿರಾ ತಾಲ್ಲೂಕಿನ ದೊಡ್ಡಾಲದಮರ ಗ್ರಾಮದ ಬಳಿ ಮಂಗಳವಾರ ನಡೆದಿದೆ.

ಚನ್ನರಾಯಪಟ್ಟದಿಂದ ಗೋವಾಗೆ ಹೋಗುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದೆ ತಕ್ಷಣ ವಾಹನ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಲ್ಲಿದ್ದವರೆಲ್ಲರೂ ಹೊರಗಡೆ ಬಂದ ತಕ್ಷಣ ಕಾರು ಏಕಾಏಕಿ ಹೊತ್ತಿ ಉರಿದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೋಗಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!