ತುಮಕೂರು: ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಶಿರಾ ಮತ್ತು ಪಾವಗಡ ತಾಲ್ಲೂಕುಗಳ ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗದಂತೆ ಸರ್ಕಾರದ ನಿಯಮಾವಳಿಯನ್ವಯ ಅನರ್ಹ ಬಿಪಿಎಲ್ ಕಾರ್ಡುಗಳ ರದ್ದತಿ ಬಗ್ಗೆ ಮಾಹಿತಿ ನೀಡಬೇಕು.

ಜಿಲ್ಲೆಯಲ್ಲಿ 12,804 ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದ್ದು. ರದ್ದುಗೊಳಿಸುವ ಸಂದರ್ಭದಲ್ಲಿ ಅರ್ಹ ಪಡಿತರ ಚೀಟಿಗಳು ರದ್ದಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.

ಶಿರಾ ತಾಲ್ಲೂಕಿನಲ್ಲಿ 1158, ಹಾಗೂ ಪಾವಗಡ ತಾಲ್ಲೂಕಿನಲ್ಲಿ 1482 ಪಡಿತರ ಚೀಟಿ ರದ್ದು ಗೊಳಿಸಲಾಗಿದೆ ಎಂದು ಆಹಾರ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸಂಸದರಿಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here