ಮುಖ್ಯ ಚುನಾವಣಾ ಆಯುಕ್ತ 3 ದಿನ ಉತ್ತರ ಪ್ರದೇಶ ಭೇಟಿ

ಹೊಸದಿಲ್ಲಿ, ಡಿಸೆಂಬರ್ 28:  ಉತ್ತರ ಪ್ರದೇಶ ವಿಧಾನಸಭೆಯ ಮಹಾ ಚುನಾವಣೆ 2022ರಲ್ಲಿ ನಡೆಯಲಿದೆ. ಈ ಬಗ್ಗೆ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಲು ಚುನಾವಣಾ ತಂಡ ಉತ್ತರ ಪ್ರದೇಶ ಪ್ರವಾಸ ಕೈಗೊಳ್ಳಲಿದೆ. ಈ ತಂಡದಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಸೇರಿದಂತೆ ಹಲವು ಮುಖ್ಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಇಂದಿನಿಂದ ಪ್ರಾರಂಭವಾಗುವ 3 ದಿನಗಳ ಭೇಟಿಯಲ್ಲಿ ಹೊಸ ರೂಪಾಂತರಿ ಒಮೈಕ್ರಾನ್ ದೃಷ್ಟಿಯಿಂದ ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಕಳೆದ ಶುಕ್ರವಾರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತರ ಪ್ರದೇಶದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಮುಂದಿನ ವಾರ ಭೇಟಿ ನೀಡುವುದಾಗಿ ತಿಳಿಸಿದ್ದರು. ಈ ಮಹತ್ವದ ಪ್ರವಾಸದ ಬಳಿಕ, ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಚುನಾವಣೆ ನಡೆಸಬೇಕೋ ಬೇಡವೋ ಎಂಬ ಬಗ್ಗೆ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.

error: Content is protected !!