‘ಬಿಹಾರದಲ್ಲೂ ಕೋವಿಡ್ ಮೂರನೇ ಅಲೆ ಪ್ರಾರಂಭ’ ಎಂದು ಎಚ್ಚರಿಸಿದ ಸಿಎಂ ನಿತೀಶ್ ಕುಮಾರ್

ಪಾಟ್ನಾ, ಡಿಸೆಂಬರ್ 29:ದೇಶಾದ್ಯಂತ ಕೋವಿಡ್-19 ಹೊಸ ರೂಪಾಂತರಿ ಒಮೈಕ್ರಾನ್ ರುದ್ರನರ್ತನ ಶುರುಮಾಡಿದ್ದು, ರಾಜ್ಯದಲ್ಲಿ ಈಗಾಗಲೇ ಮೂರನೇ ಅಲೆ ಪ್ರಾರಂಭವಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎಚ್ಚರಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ 96ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬಿಹಾರ ಈಗಾಗಲೇ ಕೋವಿಡ್‍ನ ಮೂರನೇ ಅಲೆಯ ನಡುವೆ ಇದೆ. ಆದರೂ ಸರ್ಕಾರವು ಮೂರನೇ ಅಲೆಯನ್ನು ಎದುರಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ ರಾಜ್ಯದ ಆರೋಗ್ಯ ಇಲಾಖೆಯು ಆಸ್ಪತ್ರೆಗಳಲ್ಲಿನ ಸೌಲಭ್ಯಗಳನ್ನು ಸುಧಾರಿಸುವಲ್ಲಿ ನಿರತವಾಗಿದೆ. ಇದುವರೆಗೆ ಬಿಹಾರದಲ್ಲಿ ಒಮೈಕ್ರಾನ್ ಪ್ರಕರಣ ಪತ್ತೆಯಾಗಿಲ್ಲ. ದೇಶಾದ್ಯಂತ ಸುಮಾರು 800 ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ಆದರೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದ್ದು, ಬಿಹಾರದಲ್ಲಿ 117 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಡಿಸೆಂಬರ್ 31ರಿಂದ ಜನವರಿ 2ರವರೆಗೆ ಉದ್ಯಾನವನಗಳನ್ನು ಮುಚ್ಚಲು ಆದೇಶಿಸಲಾಗಿದೆ.

error: Content is protected !!