ಮತ್ತೊಮ್ಮೆ ತುಮಕೂರಿನಿಂದಲೇ ಲೋಕಸಭೆಗೆ ಸ್ಪರ್ಧೆ: ಹೆಚ್.ಡಿ.ದೇವೇಗೌಡ

ತುಮಕೂರು: ಲೋಕಸಭೆ ಚುನಾವಣೆಯಲ್ಲಿ ಮತ್ತೆ ತುಮಕೂರಿನಿಂದಲೇ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಂಗಳವಾರ ಘೋಷಿಸಿದ್ದಾರೆ.

ಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಪಕ್ಷ ಎಂದರೆ ಕೇವಲ ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಅಲ್ಲ. ನಾನು, ನನ್ನ ಮಗ ಮಾತ್ರ ಪಕ್ಷವನ್ನು ಉಳಿಸಲು ಸಾಧ್ಯವಿಲ್ಲ’ ಎಂದರು.

‘ನನಗೀಗ 89 ವರ್ಷ. ಹೋರಾಟದ ಶಕ್ತಿ ಕುಂದಿಲ್ಲ ಇನ್ನೂ ಚೈತನ್ಯವಿದೆ. ಪಕ್ಷ ಉಳಿಸುವ ಛಲದಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸ ಮಾಡ್ತೇನೆ. 2023ರ ಚುನಾವಣೆ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೋ, ಇಲ್ಲವೋ ಗೊತ್ತಿಲ್ಲ. ಅದು ಅವರ ಹಣೆ
ಬರಹ. ನಾನು ಮಾತ್ರ 2024ರಲ್ಲಿ ಮತ್ತೆ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದರು.

error: Content is protected !!