ಪರಿಷತ್‍ ಚುನಾವಣೆ : ಕೊನೆ ಕ್ಷಣದ ಕಸರತ್ತು, ಮನೆ ಮನೆ ಪ್ರಚಾರ

ತುಮಕೂರು:: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ ಗೆ  ನಡೆಯುವ ಚುನಾವಣೆ ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆಬಿದ್ದಿದ್ದು, ಮನೆ ಮನೆ ಪ್ರಚಾರ ನಡೆಯುತ್ತಿದೆ. ಇಂದು ಮನೆ ಮನೆ ಪ್ರಚಾರಕ್ಕೆ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಅಭ್ಯರ್ಥಿಗಳು ಅವರ ಬೆಂಬಲಿಗರು ಮತದಾರ ರನ್ನು ಸಂಪರ್ಕಿಸಿ ಮತ ಯಾಚಿಸುತ್ತಿದ್ದಾರೆ.

ಕೆಲವು ಅಭ್ಯರ್ಥಿಗಳ ಬೆಂಬಲಿಗರು ಮತದಾರರನ್ನು ಸೆಳೆಯಲು ಆಸೆ, ಆಮಿಷಗಳನ್ನು ಒಡ್ಡುತ್ತಿರುವುದಲ್ಲದೆ ಸೀರೆ, ಹಣ, ಉಡುಗೊರೆಗಳನ್ನು ದಾರಾಳವಾಗಿ ನೀಡುತ್ತಿದ್ದಾರೆ ಎಂದು ಆರೋಪ ವ್ಯಾಪಕವಾಗಿ ಕೇಳಿಬರುತ್ತಿದೆ. ಡಿ.10ರಂದು ಮತದಾನ ನಡೆಯಲಿದೆ.

ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಮತ ಎಣಿಕೆಯು ಡಿ.14ರಂದು ನಡೆದು ಅಂದೇ ಫಲಿತಾಂಶ ಹೊರ ಬೀಳುವ ಸಾಧ್ಯತೆಯಿದೆ. ಡಿ.16ರ ವೇಳೆಗೆ ಚುನಾವಣೆ ಪ್ರಕ್ರಿಯೆ ಪೂರ್ಣ ಗೊಳ್ಳಲಿದೆ

ಮೂರು ಪಕ್ಷಗಳು ಈ ಚುನಾವಣೆಯನ್ನು ಪ್ರತಿಷ್ಠೆ ಯಾಗಿ ಪರಿಗಣಿಸಿ ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಶತಾಯ ಗತಾಯ ಹೋರಾಟ ನಡೆಸುತ್ತಿವೆ. ನಾನಾ ರೀತಿಯ ತಂತ್ರ, ಪ್ರತಿತಂತ್ರಗಳ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಹರ ಸಾಹಸ ಪಡುತ್ತಿವೆ. ಮುಂಬರುವ ವಿಧಾನಸಭೆ ಚುನಾವಣೆಗೆ ಈ ಮೇಲ್ಮನೆ ಚುನಾವಣೆ ದಿಕ್ಸೂಚಿಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಹೀಗಾಗಿ ಮೂರು ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿ ಪರಿಗಣಿಸಿ ಎಲ್ಲ ರೀತಿ ಮುತುರ್ವಜಿ ವಹಿಸಿ ಮತದಾರರನ್ನು ಆಕರ್ಷಿಸುವ ಪ್ರಯತ್ನದಲ್ಲಿ ನಿರತವಾಗಿವೆ.

error: Content is protected !!