ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ ದಲಿತ ಸಂಘಟನೆಗಳು.

ತುಮಕೂರು:ಚುನಾವಣೆ ಸಂದರ್ಭದಲ್ಲಿ ಎಜೆ ಸದಾಶಿವ ಆಯೋಗ ಜಾರಿ ಮಾಡುವ ಭರವಸೆಯನ್ನು ನೀಡಿದ್ದ ಸರ್ಕಾರ ಇಂದು ಅದರ ಜಾರಿಗೆ ಯಾವುದೇ ಮನ್ನಣೆ ನೀಡದೆ ಮಾದಿಗ ಸಮುದಾಯಕ್ಕೆ ಘೋರ ಅನ್ಯಾಯ ಮಾಡಿದ್ದು ಮುಂದಿನ ದಿನಗಳಲ್ಲಿ ಮಾದಿಗ ಸಮುದಾಯ ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ದಲಿತ ಸಂಘಟನೆಗಳು ಇಂದು ನೀಡಿದ್ದಾರೆ.

 ಇಂದು ತುಮಕೂರಿನ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ರಾಮಯ್ಯ ಚುನಾವಣಾ ಸಂದರ್ಭದಲ್ಲಿ ಮಾದಿಗ ಸಮುದಾಯಕ್ಕೆ ಎಜೆ ಸದಾಶಿವ ಆಯೋಗ ಜಾರಿ ಮಾಡುವ ಭರವಸೆಯನ್ನು ನೀಡಿ ಮತವನ್ನು ಪಡೆದ ಸರ್ಕಾರ ಇಂದು ಅದರ ಜಾರಿಗೆ ಯಾವುದೇ ಸಹಕಾರ ತೋರುತ್ತಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಸಮೀಪಿಸುತ್ತಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ದಿನಗಣನೆ ಶುರುವಾಗಿದೆ ಈಗಲಾದರೂ ಸದಾಶಿವ ಆಯೋಗ ಜಾರಿಗೆ ಸದನದಲ್ಲಿ ಒಪ್ಪಿಗೆ ಸೂಚಿಸಬೇಕು ಇಲ್ಲವಾದಲ್ಲಿ ರಾಜ್ಯದಲ್ಲಿ ಒಂದು ಕೋಟಿ ಐದು ಲಕ್ಷ ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯ ಕಡೆಗಣಿಸಿದ್ದೆ ಆದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ದಲಿತ ಸಂಘಟನೆಗಳು ನೀಡಿದ್ದಾರೆ.

ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರವನ್ನು ಅಧಿಕಾರದಿಂದ ಇಳಿಸುವ ಮುಖಾಂತರ ನಮ್ಮ ನಮ್ಮ ಒಗ್ಗಟ್ಟು ಪ್ರದರ್ಶನ ಮಾಡಿದ್ದೇವೆ ಇದನ್ನರಿಯದ ಸರ್ಕಾರ ಇನ್ನು ಭಂಡತನದಿಂದ ನಡೆದುಕೊಳ್ಳುತ್ತಿದ್ದು ಇನ್ನಾದರೂ ಎಚ್ಚೆತ್ತುಕೊಂಡು ಅಧಿವೇಶನದಲ್ಲಿ ಸದಾಶಿವ ಆಯೋಗ ಜಾರಿಗೆ ಮುಂದಾಗಬೇಕಾಗಿದೆ ಇಲ್ಲವಾದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಅಧಿಕಾರದಲ್ಲಿರುವ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವ ದಿನಗಳು ದೂರವಿಲ್ಲ ಎಂದು ದಲಿತ ಸಂಘಟನೆಯ ಮುಖಂಡರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ದಲಿತ ಮುಖಂಡ ಪಿಎಂ ರಾಮಯ್ಯ ಬಂಡೆ ಕುಮಾರ್ ರಾಜು ರಾಜೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!