ತುಮಕೂರು: ಕಾಲೇಜಿನಲ್ಲಿ ಸಂವಿಧಾನ (constitution of india) ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ ಮೂಲಕ ವಿವಿಧ ರಾಷ್ಟ್ರೀಕೃತ ಬ್ಯಾಂಕ್ ಗಳು ಹಾಗೂ ಸಂಘ ಸಂಸ್ಥೆ ಗಳು ಹೊಸ ವಿವಾದವನ್ನ ಸೃಷ್ಠಿಸಿದ್ದು ದಲಿತ‌ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ತುಮಕೂರು‌ ಜಿಲ್ಲೆ ತುರುವೇಕೆರೆ ಪಟ್ಟಣದ ಶ್ರೀ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಜುಲೈ 26 ರಂದು ಕಾರ್ಗಿಲ್ ವಿಜಯದಿನ ಆಚರಣೆ ಹಾಗೂ ಚರ್ಚಾ ಸ್ಪರ್ಧೆಯನ್ನ ನಡೆಸಲು ವಿವಿಧ ಸಂಘ ಸಂಸ್ಥೆಗಳು ಸಿದ್ದತೆ ನಡೆಸಿದ್ದವು. ಕಾಲೇಜಿನ ಪ್ರಾಂಶುಪಾಲರಾದ ಎಸ್ ಎಂ ಕಾಂತರಾಜ್ ಅಧ್ಯಕ್ಷತೆಯಲ್ಲಿ ರೋಟರಿ ಕ್ಲಬ್,(Rotary Club) ಲಯನ್ಸ್ ಕ್ಲಬ್,(Loins Club) ಸುರಭಿ ಸಂಗಮ ಸಂಸ್ಥೆಗಳ ಆಶ್ರಯದೊಂದಿಗೆ ಕರ್ನಾಟಕ ಬ್ಯಾಂಕ್,(Karnataka Bank) ಎಸ್ ಬಿ ಐ(SBI BANK) ಬ್ಯಾಂಕ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲು ಸಿದ್ದತೆ ನಡೆದಿತ್ತು. ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚರ್ಚಾ ಸ್ಪರ್ಧೆಯಲ್ಲಿ (constitution of india) “ಭಾರತದ ಸಂವಿಧಾನಕ್ಕೆ ಬದಲಾವಣೆ ಅಗತ್ಯವೇ.?” ಎಂಬ ಪ್ರಶ್ನಾರ್ಥಕ ವಿಷಯವನ್ನ ನೀಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಈ ಹಿಂದೆ ಹಲವು ಬಿಜೆಪಿ ನಾಯಕರು ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದು ಕಳೆದ ಲೋಕಸಭಾ ಚುನಾವಣೆ ಯಲ್ಲಿ ಆಡಳಿತಾರೂಡ ಬಿಜೆಪಿ ಪಕ್ಷದ ಹಿನ್ನಡೆಗೂ ಕಾರಣವಾಗಿತ್ತು. ಇದೀಗ ಸಂಘ ಸಂಸ್ಥೆಗಳು ಬ್ಯಾಂಕ್ ಗಳು ಸೇರಿ ಕಾಲೇಜುಗಳಲ್ಲೆ ಸಂವಿಧಾನ ಬದಲಾವಣೆ ಕುರಿತ ವಿಷಯವನ್ನ ಚರ್ಚಿಸಲು ಮುಂದಾಗಿರುವುದು ಸಂವಿಧಾನ ವಿರೋಧಿ ಚಟುವಟಿಕೆ ಎಂದು ಆರೋಪಿಸಿ ಕಾರ್ಯಕ್ರಮಕ್ಕೆ ದಲಿತ ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿವೆ.

ಅಲ್ಲದೆ ಚರ್ಚಾ ಸ್ಪರ್ಧೆಯನ್ನ ನಡೆಸಲು ಸಿದ್ದತೆ ನಡೆಸಿದ್ದ ಆಯೋಜಕರ ವಿರುದ್ದ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆಯೋಜಕರ ವಿರುದ್ದ ಎಫ್ ಐ ಆರ್ ದಾಖಲಿಸದೇ ಪೊಲೀಸರು ವಿಳಂಬ ಮಾಡಿದ್ದಕ್ಕೆ ತುರುವೇಕೆರೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ತಹಶೀಲ್ದಾರ್ ಮೂಲಕ ಸರ್ಕಾರಕ್ಕೂ ಮನವಿ ಸಲ್ಲಿಸಿರುವ ಹೋರಾಟಗಾರರು, ಪೊಲೀಸರು ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವ(Indian Democracy) ಅಪಾಯದಲ್ಲಿದೆ, ಸಂವಿಧಾನ ರಕ್ಷಣೆ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಹೋದಲ್ಲಿ, ಬಂದಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡಿ ಪ್ರಚಾರ ಗಿಟ್ಟಿಸಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಇದೀಗ ತಮ್ಮದೇ ಸರ್ಕಾರ ವಿದ್ದರೂ ಸಹ ಸಂವಿಧಾನ ವಿರೋಧಿ ಚಟುವಟಿಕೆ‌ ನಡೆಸುವವರ ವಿರುದ್ದ ಪೊಲೀಸ್ ಇಲಾಖೆ ಕಾನೂನು ಕ್ರಮ ಜರುಗಿಸಲು ಮೀನಾಮೇಷ ಎಣಿಸುತ್ತಿರುವುದು ವಿಪರ್ಯಾಸ ಎಂದು ದಲಿತ ಮುಖಂಡರು ಅಸಮಧಾನ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here