ದೀಪಾವಳಿ ಹಸಿರು ಪಟಾಕಿಗೆ ಮಾತ್ರ ಅವಕಾಶ; ಕರ್ನಾಟಕ ಸರ್ಕಾರದ ಮಾರ್ಗಸೂಚಿ ಬಿಡುಗಡೆ

Deepavali Covid Guidelines: ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ; ಕರ್ನಾಟಕ ಸರ್ಕಾರದ ಮಾರ್ಗಸೂಚಿ ಬಿಡುಗಡೆ

ಪಟಾಕಿ

ಬೆಂಗಳೂರು: ದೀಪಾವಳಿ ದಿನಾಂಕ ಸಮೀಪಿಸುತ್ತಿರುವಂತೆ ಹಬ್ಬದ ಆಚರಣೆ ಸಂಬಂಧ ಕರ್ನಾಟಕ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.

ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ, ನವೆಂಬರ್ ಒಂದರಿಂದ ಹತ್ತನೇ ತಾರೀಕಿನವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಕನ್ನಡ ರಾಜ್ಯೋತ್ಸವ ಆಚರಣೆ: 500 ಜನರಿಗೆ ಮಾತ್ರ ಅವಕಾಶ
ಕನ್ನಡ ರಾಜ್ಯೋತ್ಸವ, ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು. ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಎಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ ಇರುತ್ತದೆ. ಇದು ಬೆಂಗಳೂರಿಗೆ ಮಾತ್ರ ಸೀಮಿತವಲ್ಲ. ಸಾಮಾಜಿಕ ಅಂತರವಿಲ್ಲದೇ ನಡೆಸುವ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುತ್ತದೆ ಎಂದು ತಿಳಿಸಲಾಗಿದೆ.

error: Content is protected !!