Gold Price Today: ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ..ದರ ವಿವರ ಮಾಹಿತಿ ಇಲ್ಲಿದೆ

Gold and Silver Value At this time | ಬೆಂಗಳೂರು: ಪೆಟ್ರೋಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿದೆ. ಚಿನ್ನದ ಬೆಲೆ ಕಡಿಮೆಯಾದ ಸಂತೋಷದಲ್ಲಿರುವ ಜನರು ದೀಪಾವಳಿ ಹಬ್ಬದಲ್ಲಿ ಚಿನ್ನ ಖರೀದಿಗೆ ಯೋಜನೆ ಹಾಕಿಕೊಂಡಿರುತ್ತಾರೆ. ಅಂತಹ ಜನರಿಗೆ ಇಂದಿನ ಚಿನ್ನ (Gold Value), ಬೆಳ್ಳಿ ದರ (Silver Value) ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಹಜ. ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ (Bangalore Gold value)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಂದು ಯಾವುದೇ ಏರಿಕೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Chennai Gold Value)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,060 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,160 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,91,600 ರೂಪಾಯಿ ನಿಗದಿಯಾಗಿದೆ. ಚಿನ್ನದ ದರದಲ್ಲಿ ಯಾವುದೇ ಏರಿಳಿತ ಕಂಡು ಬದಿಲ್ಲ. ಬೆಳ್ಳಿ ಬೆಲೆಯೂ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 68,900 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold value)
ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,87,700 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆಯಲ್ಲಿಯೂ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ 68,900 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Value)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ಬೆಲೆಯಲ್ಲಿಯೂ ಸಹ ಯಾವುದೇ ಏರಿಳಿತಗಳಿಲ್ಲ, ಕೆಜಿ ಬೆಳ್ಳಿ ಬೆಲೆ 64,600 ರೂಪಾಯಿ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!