ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ:ಪ್ರಿಯಾಂಕ ಗಾಂಧಿ

ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿದೆ. ಈ ವೇಳೆ ರಾಜ್ಯದಲ್ಲಿ ಮತ್ತೇ ಪುಟಿದೇಳುವ ಪ್ರಯತ್ನದಲ್ಲಿ ಕಾಂಗ್ರೆಸ್ ಇದೆ. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ರಾಜ್ಯದಾದ್ಯಂತ ಪಕ್ಷವನ್ನು ಸಂಘಟಿಸುವತ್ತ ಗಮನ ಹರಿಸಿದ್ದಾರೆ. ಜೊತೆಗೆ ಮುಂದಿನ ಚುನಾವಣೆಯ ತಯಾರಿಗಾಗಿ ಜನಪ್ರಿಯ ಭರವಸೆಗಳನ್ನು ರಾಜ್ಯದ ಜನತೆಗೆ ನೀಡುತ್ತಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಐದು ಸರ್ಕಾರಿ ಉದ್ಯೋಗಗಳಲ್ಲಿ ಎರಡು ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿರುವುದಾಗಿ ಘೋಷಣೆ ಮಾಡಿದ್ದಾರೆ. ಇಷ್ಟೇ ಅಲ್ಲದೆ ವಾರ್ಷಿಕವಾಗಿ 3 ಅಡುಗೆ ಅನಿಲ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುತ್ತೇವೆ ಎಂದು ಅವರು ಘೋಷಿಸಿದ್ದಾರೆ.

ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆಯನ್ನು ಪ್ರಿಯಾಂಕ ಗಾಂಧಿ ರಾಜ್ಯ ಮಹಿಳೆಯರಿಗೆ ಭರವಸೆ ನೀಡಿದ್ದಾರೆ.

ಪ್ರಿಯಾಂಕ ಈ ಹಿಂದೆ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಜೊತಗೆ ರಾಜ್ಯದ ಚುನಾವಣೆಯಲ್ಲಿ ಪಕ್ಷವು 40% ಮಹಿಳೆಯರಿಗೆ  ಟಿಕೆಟ್ ನೀಡುವುದಾಗಿ ಘೋಷಿಸಿದ್ದರು. ಪಕ್ಷವು ಪ್ರಣಾಳಿಕೆ ಸಮಿತಿ ಇದಕ್ಕೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದರು.

ಇಷ್ಟೇ ಅಲ್ಲದೆ ಅವರು, ಕಳೆದ ಶನಿವಾರದಂದು ರೈತರ ಸಾಲ ಮನ್ನಾ ಮತ್ತು 20 ಲಕ್ಷ ಜನರಿಗೆ ಉದ್ಯೋಗ ಸೇರಿದಂತೆ ಏಳು ಭರವಸೆಗಳನ್ನು ಜನತೆಯ ಮುಂದಿಟ್ಟಿದ್ದರು. ಗೋಧಿ ಮತ್ತು ಭತ್ತವನ್ನು ಕ್ವಿಂಟಾಲ್‌ಗೆ 2,500 ರೂ.ಗೆ ಮತ್ತು ಕಬ್ಬಿಗೆ ಕ್ವಿಂಟಾಲ್‌ಗೆ 400 ರೂ. ನೀಡಿ ಖರೀದಿಸುವುದಾಗಿ ಅವರು ತಮ್ಮ ಭರವಸೆಗಳಲ್ಲಿ ಘೋಷಿಸಿದ್ದಾರೆ.

10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ವಿದ್ಯುತ್ ಬಿಲ್ ದರ ಅರ್ಧದಷ್ಟು ಕಡಿತಗೊಳಿಸುವುದು ಮತ್ತು ಸಾಂಕ್ರಾಮಿಕದಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಕುಟುಂಬಗಳಿಗೆ 25,000 ರೂಪಾಯಿಗಳನ್ನು ನೀಡುವುದಾಗಿ ಅವರು ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!