ಬೆಂಗಳೂರು: ಸಂಚಾರಿ ಪೊಲೀಸ್ ಜಂಟಿ ಆಯುಕ್ತ ಬಿ.ಆರ್ ರವಿಕಾಂತೇಗೌಡ ಮನೆಯಲ್ಲಿ ಕಳ್ಳತನ

ಬೆಂಗಳೂರು: ಟ್ರಾಫಿಕ್ ಪೊಲೀಸ್ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ಕಳವು ಆಗಿವೆ.‌

ಬಿ.ಆರ್. ರವಿಕಾಂತೇಗೌಡ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಈ ಬಗ್ಗೆ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಳ್ಳಾರಿಯ ಮಹಿಳೆಯೊಬ್ಬರು ರವಿಕಾಂತೇಗೌಡ ಮನೆಯಲ್ಲಿ ಕೆಲ ವರ್ಷಗಳಿಂದ ಕೆಲಸಕ್ಕಿದ್ದರು. ಯಾರಿಗೂ ಹೇಳದೇ ಅವರು ಸೋಮವಾರ ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಲ್ಲಿಕೆಯಾದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಮಹಿಳೆಯ ಕಾಯಂ ವಿಳಾಸ ಹಾಗೂ ಅವರ ಸಂಬಂಧಿಕರ ಮಾಹಿತಿ ಕಲೆ ಹಾಕಲಾಗಿದೆ. ಮಹಿಳೆ ಇರುವ ಜಾಗವನ್ನು ಪತ್ತೆ ಮಾಡಲಾಗಿದ್ದು, ಅವರನ್ನು ನಗರಕ್ಕೆ ಕರೆತಂದು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.

error: Content is protected !!