ಕರಾಮುವಿ: 2020-21ನೇ ಸಾಲಿನ ಪ್ರವೇಶಾತಿ ಪ್ರಾರಂಭ


ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2020-21ನೇ ಸಾಲಿನ ಸ್ನಾತಕ/ಸ್ನಾತಕೋತ್ತರ ಪದವಿ ಕೋರ್ಸ್‌ಗಳಾದ ಬಿ.ಎ/ಬಿ.ಕಾಂ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ., ಎಂ.ಎಲ್.ಐ.ಎಸ್ಸಿ, ಎಂಎಸ್ಸಿ, ಎಂಬಿಎ, ಪಿ.ಜಿ. ಡಿಪ್ಲೊಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್, ಬಿ.ಇಡಿ. ತರಗತಿಗಳ ಜನವರಿ ಆವೃತ್ತಿ ಪ್ರಥಮ ವರ್ಷದ ಪ್ರವೇಶಾತಿ ಪ್ರಕ್ರಿಯೆಯು ಮಾರ್ಚ್ 12 ರಿಂದ ಆರಂಭವಾಗಿದೆ.

ಪ್ರವೇಶಾತಿ ಪ್ರಕ್ರಿಯೆಯು ಸಂಪೂರ್ಣ ಆನ್‌ಲೈನ್ ಮೂಲಕವಾಗಿದ್ದು, ಅರ್ಜಿ ಸಲ್ಲಿಸಲು ಕರಾಮುವಿಯ ಅಧಿಕೃತ ಜಾಲತಾಣ www.ksoumysuru.ac.in ನಲ್ಲಿ ಲಾಗಿನ್ ಆಗಬೇಕು. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಪ್ರವೇಶಾತಿ ಅರ್ಜಿ ಭರ್ತಿ ಮಾಡಿ ಏಪ್ರಿಲ್ 12 ರೊಳಗಾಗಿ ಸಲ್ಲಿಸಬೇಕು. ನಂತರ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದುದಾಗಿದೆ.

ದಂಡಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 30 ರವರೆಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಕರಾಮುವಿಯ ಪ್ರಾದೇಶಿಕ ಕೇಂದ್ರದ ಮೊಬೈಲ್ ಸಂಖ್ಯೆ: 9108808219 ನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕ ದಿಲೀಪ.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!