‘ಬ್ಲಾಕ್ ಫಂಗಸ್’ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚನೆ.

ತುಮಕೂರು: ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ/ ಖಾಸಗಿ ಆಸ್ಪತ್ರೆಗಳಲ್ಲಿ MUCOR MYCOSIS ಬ್ಲಾಕ್ ಫಂಗಸ್ ಖಾಯಿಲೆಯಡಿ ವರದಿಯಾಗುತ್ತಿರುವ ಪ್ರಕರಣಗಳ ಕುರಿತು ಅಗತ್ಯ ಮಾಹಿತಿಯನ್ನು ಸಂಬಂಧಪಟ್ಟ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಒದಗಿಸಬೇಕು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು ಸೂಚಿಸಿದ್ದಾರೆ.

ಮಾಹಿತಿ ಒದಗಿಸದೇ ಇದ್ದಲ್ಲಿ ಸಂಬಂಧಪಟ್ಟವರ ವಿರುದ್ದ ಕರ್ನಾಟಕ ಸಾಂಕ್ರಾಮಿಕ ಅಧಿನಿಯಮ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಸೂಕ್ತ ಕ್ರಮ ವಹಿಸಲಾಗುವುದೆಂದು ಅವರು ತಿಳಿಸಿದ್ದಾರೆ.

error: Content is protected !!