ಸಿದ್ದಗಂಗಾ ಮಠದಲ್ಲಿ ಕೃಷಿ ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಸಚಿವ ಮಾದುಸ್ವಾಮಿ ಚಾಲನೆ.

ತುಮಕೂರು: ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರೆ ಪ್ರಯುಕ್ತ ಮಠದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.‌ಮಾಧುಸ್ವಾಮಿ ಅವರು ಚಾಲನೆ ನೀಡಿದರು.

ಇಂದಿನಿಂದ 15 ದಿನಗಳ ಕಾಲ ನಡೆಯುವ ವಸ್ತುಪ್ರದರ್ಶನದಲ್ಲಿ ಜನರಿಗೆ ಕೃಷಿ, ತೋಟಗಾರಿಕೆ, ರೇಷ್ಮೆ , ಆರೋಗ್ಯ, ಶಿಕ್ಷಣ, ಪೊಲೀಸ್ ಹೀಗೆ ವಿವಿಧ ಇಲಾಖೆಗಳಲ್ಲಿರುವ ಯೋಜನೆ/ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಲಾಗಿದೆ.

ಚಾಲನೆ‌ ನೀಡಿದ ಬಳಿಕ ವಸ್ತುಪ್ರದರ್ಶನದಲ್ಲಿ ಅನಾವರಣಗೊಂಡಿದ್ದ ಪ್ರದರ್ಶನಗಳನ್ನು ಒಂದೊಂದಾಗಿಯೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರು ಜೊತೆಯಾಗಿ ವೀಕ್ಷಿಸಿದರು.
ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದ ದಿವ್ಯಸಾನಿಧ್ಯವನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿಗಳು ವಹಿಸಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊರೊನಾ ಕುರಿತ ಜಾಗೃತಿ ಮೂಡಿಸುವ ವಿಶೇಷ ಪ್ರದರ್ಶನವನ್ನು ಅನಾವರಣಗೊಳಿಸಲಾಗಿತ್ತು.

ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾಧಿಕಾರಿ ವೈ.ಎಸ್. ‌ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!