ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರಾದ ಬಿ.ಸಿ. ನಾಗೇಶ್ ಅವರಿಗೆ ಕೋವಿಡ್ ದೃಢ ಪಟ್ಟಿದೆ.

ನಾಗೇಶ್ ಅವರಿಗೆ ಕೋವಿಡ್ ಲಘು ಲಕ್ಷಣಗಳು ಕಾಣಿಸಿದ ಕಾರಣ ಇಂದು ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು.
ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.

ಸಚಿವರ ಸಂಪರ್ಕಕ್ಕೆ ಬಂದ ಕೆಲವರು ಈಗಾಗಲೇ ಪರಿಕ್ಷೆ ಮಾಡಿಸಿಕೊಂಡಿದ್ದಾರೆ. ಸರಕಾರದ ಪ್ರಮುಖರಲ್ಲೇ ಸೋಂಕು ಕಾಣಿಸಿರುವ ಹಿನ್ನಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ.

error: Content is protected !!