ಹೆಬ್ಬೂರಿನಲ್ಲಿ ಶಾಸಕ ಗೌರಿಶಂಕರ್ ಜನತಾದರ್ಶನ ಕಾರ್ಯಕ್ರಮ

ತುಮಕೂರು: ಗ್ರಾಮಾಂತರ ಶಾಸಕರ ನಡಿಗೆ ಗ್ರಾಮಗಳ ಕಡೆಗೆ ಎಂಬ ಧ್ಯೇಯದಲ್ಲಿ ನಡೆಯುತ್ತಿರುವ ಶಾಸಕರ ಜನತಾ ದರ್ಶನದಲ್ಲಿ 80 ಕ್ಕೂ ಹೆಚ್ಚು ಮಂದಿಗೆ ಸ್ಥಳದಲ್ಲಿ ವಿವಿಧ ಪಿಂಚಣಿ ಯೋಜನೆಗಳ ಮಂಜೂರಾತಿ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಗ್ರಾಮಾಂತರ ಶಾಸಕ ಗೌರಿಶಂಕರ್ ಮಾತನಾಡಿ ಜನತಾದರ್ಶನದಿಂದ ಜನರಿಗೆ ಅನುಕೂಲವಾಗುತ್ತಿದ್ದು, 600 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ಕಂದಾಯ ಇಲಾಖೆಯಲ್ಲೇ ಹೆಚ್ಚಿನ ಸಮಸ್ಯೆಗಳು ಇದ್ದು, ಖಾತೆ, ಪಹಣಿ ಬದಲಾವಣೆ ಸೇರಿದಂತೆ ನಿವೇಶನ ಮಂಜೂರಾತಿ ಸಮಸ್ಯೆಗಳ ಬಗ್ಗೆ ಅರ್ಜಿ ಸಲ್ಲಿಕೆಯಾಗಿದ್ದು, ಕಾನೂನಾತ್ಮಕ ತೊಡಕಿರುವ ಸಮಸ್ಯೆಗಳನ್ನು ಹೊರತುಪಡಿಸಿ ಉಳಿದ ಅರ್ಜಿಗಳಿಗೆ ಸಾಧ್ಯವಾದರೆ ಸ್ಥಳದಲ್ಲಿಯೇ ಪರಿಹಾರವನ್ನು ಕಂಡುಕೊಳ್ಳಲಾಗುವುದು, ಉಳಿದ ಅರ್ಜಿಗಳನ್ನು ಒಂದು ತಿಂಗಳೊಳಗೆ ಅರ್ಜಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ಅರ್ಜಿದಾರರಿಗೆ ಉತ್ತರ ನೀಡಲಾಗುವುದು ಎಂದು ಹೇಳಿದರು.

ಜನತಾ ದರ್ಶನದಲ್ಲಿ ತಹಶೀಲ್ದಾರ್ ಮೋಹನ್ಕುಮಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜೈಪಾಲ್, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಜನತಾ ದರ್ಶನಕ್ಕೆ ಆಗಮಿಸಿದ್ದ ರೈತರು ಹಾಗೂ ಸಾರ್ವಜನಿಕರಿಗೆ ಊಟ ವ್ಯವಸ್ಥೆಯನ್ನು ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!