Shootout:ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಹತ್ಯೆ ಆರೋಪಿಗೆ ಗುಂಡು.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿದೆ.

ನಾಗವಾರ ರಿಂಗ್ ರಸ್ತೆಯ ಸರ್ವಿಸ್ ರೋಡ್ ನಲ್ಲಿ ನವೆಂಬರ್ 14 ರಂದು ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಎಂಬವರ ಹತ್ಯೆ ನಡೆದಿತ್ತು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ ಜಪ್ತಿ ಮಾಡಲು ಪೊಲೀಸರು ತೆರಳಿದ್ದರು.

ಈ ವೇಳೆ ಪಿಎಸ್ಐ ಮೇಲೆ ಹಲ್ಲೆ ನಡೆಸಿ ಆರೋಪಿ ರಘು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಅಲರ್ಟ್ ಆದ ಇನ್ಸ್ ಪೆಕ್ಟರ್ ವಸಂತ್ ಕುಮಾರ್, ಆತ್ಮ ರಕ್ಷಣೆಗಾಗಿ ಆರೋಪಿ ರಘು ಮೇಲೆ ಗುಂಡು ಹಾರಿಸಿದ್ದಾರೆ. ರಾಮಮೂರ್ತಿನಗರದ ಹೆಣ್ಣೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ, ಶ್ರೀಧರ್ ಕೊಲೆ ಪ್ರಕರಣದ ಆರೋಪಿಯನ್ನ ದಸ್ತಗಿರಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ ಆಯುಧ ಜಪ್ತಿ ಮಾಡಲು ಆರೋಪಿಯನ್ನು ಸ್ಥಳಕ್ಕೆ ಕರೆತರಲಾಗಿತ್ತು.

ಈ ವೇಳೆ ಆರೋಪಿ ರಘು ಕೃತ್ಯಕ್ಕೆ ಬಳಸಿದ್ದ ಆಯುಧದಿಂದ ಪಿಎಸ್ಐ ಲಿಂಗರಾಜ್ ಮೇಲೆ ಹಲ್ಲೆ ಮಾಡಿದ್ದಾನೆ. ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಆದರೂ ಸಹ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಈ ಹಿನ್ನಲೆ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಆರೋಪಿ ರಘು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಅಂತಾ

error: Content is protected !!