ಕೊರೊನಾ ಲಸಿಕೆ ಹಾಕಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ.

ದೆಹಲಿ: ಇಂದಿನಿಂದ ದೇಶಾದ್ಯಂತ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು ದೆಹಲಿಯ ಏಮ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಲಸಿಕೆ ಹಾಕಿಸಿಕೊಂಡಿದ್ದಾರೆ

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ಹಾಕಲಾಗಿತ್ತು, ಎರಡನೆ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ಮೇಲ್ಪಟ್ಟ ಉದ್ಯೋಗಿಗಳಿಗೆ ಕೊರೊನಾ ಲಸಿಕೆಗೆ ಚಾಲನೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ದೆಹಲಿಯ ಏಮ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವದೇಶಿಯವಾಗಿ ಉತ್ಪಾದಿಸಿರುವ ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಪುದುಚೆರಿಯ ನರ್ಸ್ ನಿವೇದಿತಾ ಪ್ರಧಾನಿ ಮೋದಿಗೆ ಲಸಿಕೆಯನ್ನ ಹಾಕಿದ್ದಾರೆ.

ಲಸಿಕೆ ಪಡೆದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿ ಜಾಗತೀಕವಾಗಿ ಕಾಡುತ್ತಿರುವ ಕೋವಿಡ್ ವಿರುದ್ದ ನಮ್ಮ ವೈಧ್ಯರು ಎಷ್ಟು ಹೋರಾಡುತ್ತಿದ್ದಾರೆ ಎಂಬುದಕ್ಕೆ ಇದುವೇ ಸಾಕ್ಷಿ, ಎಲ್ಲರೂ ಲಸಿಕೆ ಪಡೆಯಬೇಕು, ಕೋವಿಡ್ ಮುಕ್ತ ಮಾಡಲು ಎಲ್ಲರೂ ಒಗ್ಗೂಡಬೇಕು ಎಂದು ಮನವಿ ಮಾಡಿದ್ದಾರೆ.

error: Content is protected !!