ತೈಲಬೆಲೆ ಏರಿಕೆ ವಿರೋಧಿಸಿ ಮಾ.09 ರಂದು ಪ್ರತಿಭಟನೆ.

ತುಮಕೂರು: ಬಡ, ಮಧ್ಯಮ ವರ್ಗದವರ ಮೇಲೆ ತೈಲ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಪ್ರಹಾರ ಮಾಡುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮಾ 09 ರಂದು ಬೆಳಿಗ್ಗೆ 10 ಗಂಟೆಗೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದಾಗಿ ಪೆಟ್ರೋಲ್ ಡೀಸೆಲ್ ಗ್ಯಾಸ್ ರಸಗೊಬ್ಬರ ಪೈಪ್ ಹಾಗೂ ದಿನನಿತ್ಯ ಬಳಕೆಯ ವಸ್ತುಗಳ ದರ ಹೆಚ್ಚಳವಾಗಿರುವುದನ್ನು ವಿರೋಧಿಸಿ ಪ್ರತಿಭಟನೆ ಏರ್ಪಡಿಸಲಾಗಿದ್ದು, ಸಾರ್ವಜನಿಕರು, ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ತಾಲ್ಲೂಕು ಜೆಡಿಎಸ್ ಘಟಕ ಪ್ರಕಟಣೆಯಲ್ಲಿ ಕೋರಿದೆ.

ಜನತಾದರ್ಶನ.

ಪ್ರತಿಭಟನೆ ಮುಗಿದ ನಂತರ 12 ಗಂಟೆಯಿಂದ ಸಂಜೆ 4 ಗಂಟೆವರೆಗೂ ಹೆಬ್ಬೂರು ನಾಡಕಚೇರಿಯ ಆವರಣದ ಬಳಿ ತುಮಕೂರು ಗ್ರಾಮಾಂತರ ಜನಪ್ರಿಯ ಶಾಸಕರಾದ ಡಿಸಿ ಗೌರಿಶಂಕರ್ ಅವರು ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲಿಯೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ಸೂಕ್ತ ಪರಿಹಾರ ಒದಗಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಜನತಾ ದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ಸ್ವತಃ ಶಾಸಕರೆ ಕಲ್ಪಿಸಿರುತ್ತಾರೆ. ಜನತಾ ದರ್ಶನಕ್ಕೆ ಬರುವ ಎಲ್ಲ ಸಾರ್ವಜನಿಕರು ತಪ್ಪದೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.

Leave a Reply

Your email address will not be published. Required fields are marked *

error: Content is protected !!