ತೆರಿಗೆ ಹೆಚ್ಚಳ ಹಿನ್ನೆಲೆ ಗುಬ್ಬಿ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ.

ಗುಬ್ಬಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕ ರಿಗೆ ಮೂಲಭೂತ ಸೌಲಭ್ಯಗಳನ್ನು ನೀಡದಿದ್ದರು ಸಹ ತೆರೆಗೆ ಹೆಚ್ಚಳಕ್ಕೆ ಮುಂದಾಗಿರುವುದು ಸರಿಯಲ್ಲ ಮೊದಲು ಪಟ್ಟಣದ ಅಭಿವೃದ್ಧಿ ಗೆ ಮುಂದಾಗಿ ನಂತರ ತೆರಿಗೆ ಹೆಚ್ಚಳಮಾಡುವ ಬಗ್ಗೆ ಯೋಚಿಸಿ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ದ ಕಿಡಿಕಾರಿದರು.

ಇಂದು ಗುಬ್ಬಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನೆಡೆದ ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಚರ್ಚೆನೆಡೆಸಿದ ಸಾರ್ವಜನಿಕರು ಆಕ್ರೋಶ ಹೊರಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಪಟ್ಟಣದಲ್ಲಿ ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಒಂದು ವರ್ಷ ಗಳಿಂದ ಪಟ್ಟಣದ ವ್ಯಾಪ್ತಿಯಲ್ಲಿ ರುವ ಸೇತುವೆಗಳು ದುರಸ್ಥಿ ಯಾಗಿದ್ದರು ಸಹ ಅದನ್ನು ಸರಿಪಡಿಸುವಲ್ಲಿ ಅಧಿಕಾರಿಗಳು ಮುಂದಾಗುತ್ತಿಲ್ಲ.ಪಟ್ಟಣಕ್ಕೆ ಪ್ರತ್ಯೇಕವಾಗಿ ವಿದ್ಯುತ್ ಸಂಪರ್ಕ ಪಡೆಯಲು ಮನವಿ ಮಾಡಿದರು ಸಹ ಯಾವುದೇ ಪ್ರಯೋಜನವಾಗಿಲ್ಲ . ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ಜನತೆ ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿರುವ ಈ ಸಮಯದಲ್ಲಿ ಏಕಾ ಏಕಿ ತೆರಿಗೆ ಹೆಚ್ಚಿಸುವುದು ಸರಿಯಲ್ಲ ಮೊದಲು ಸಾರ್ವಜನಿಕ ರ ಸಮಸ್ಯೆ ಗಳನ್ನು ಸರಿಪಡಿಸಲು ಮತ್ತು ಮೂಲಭೂತ ಸೌಕರ್ಯಗಳನ್ನು ನೀಡಲು ಕ್ರಮವಹಿಸಿ  ಎಂದು ತಿಳಿಸಿದರು.

ಇನ್ನೂ ಬಜೆಟ್ ವಿಚಾರವಾಗಿ ಮತ್ತು ಅಭಿವೃದ್ಧಿ ವಿಚಾರವಾಗಿ ಪಟ್ಟಣ ಪಂಚಾಯಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿ.ಮುಖ್ಯಾಧಿಕಾರಿ.ಸದಸ್ಯರು. ಹಾಜರಿದ್ದರು.

error: Content is protected !!