ಹೊಸ ವರ್ಷಾಚರಣೆಗೆ ನಿರ್ಬಂಧ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಕೋವಿಡ್‌-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆಗೆ ಬಹಿರಂಗ ಸಂತೋಷ ಕೂಟಗಳನ್ನು ಆಯೋಜನೆ ಮಾಡುವುದನ್ನು ನಿಷೇಧಗೊಳಿಸಲಾಗಿದೆ ಎಂದು ತಿಳಿಸಿದರು.

ಕೊವಿಡ್ ಬೆಳವಣಿಗೆಗಳನ್ನ ಗಮನದಲ್ಲಿಟ್ಟುಕೊಂಡು ಹೊಸವರ್ಷಾಚರಣೆಗೆ ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಸಿಎಂ, ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ. ಆದರೆ ಚರ್ಚ್ ಗಳಲ್ಲಿ ಕ್ರಿಸ್ ಮಸ್ ಪ್ರಾರ್ಥನೆಗೆ ಯಾವುದೇ ನಿರ್ಬಂಧವಿಲ್ಲ ಎಂದರು.

ಬಹಿರಂಗ ಪಾರ್ಟಿಗೆ ಅವಕಾಶವಿರುವುದಿಲ್ಲ. ಡಿಸೆಂಬರ್ 30 ರಿಂದ ಜನವರಿ 2ರ ವರೆಗೂ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಯಾವುದೇ ಪಾರ್ಟಿಗಳನ್ನ ಮಾಡುವಂತಿಲ್ಲ. ಅಪಾರ್ಟ್ಮೆಂಟುಗಳಲ್ಲಿ ಜನರನ್ನ ಸೇರಿಸಿ ಪಾರ್ಟಿ ಮಾಡುವಂತಿಲ್ಲ. ಬಾರ್‌ ಅಂಡ್‌ ರೆಸ್ಟೋರೆಂಟ್‌ ಸಿಬ್ಬಂದಿಗೆ ಎರಡು ಡೋಸ್ ವ್ಯಾಕ್ಸಿನೇಷನ್ ಕಡ್ಡಾಯ. ದೊಡ್ಡ ಮಟ್ಟದಲ್ಲಿ ಪಾರ್ಟಿ ಆಯೋಜನೆ ಮಾಡುವಂತಿಲ್ಲ. ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂದರು.

error: Content is protected !!