15-18 ವರ್ಷ ವಯಸ್ಸಿನವರಿಗೆ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಲಸಿಕೆ ನೀಡಲು ಯೋಜನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮಕ್ಕಳು ಹಾಗೂ ವಯೋ ವೃದ್ಧರ ಆರೋಗ್ಯ ವಿಚಾರದಲ್ಲಿ ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಯಸ್ಕರು ಮತ್ತು ಅರ್ಹ ಫಲಾನುಭವಿಗಳನ್ನು ಲಸಿಕಾ ಕೇಂದ್ರಗಳತ್ತ ಸೆಳೆಯಲು ಯೋಜನೆಗಳನ್ನು ರೂಪಿಸುತ್ತಿದೆ.

ಮಕ್ಕಳಿಕೆ ಲಸಿಕೆ ನೀಡುವುದರ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಕ್ಕಳು ಲಸಿಕೆ ಪಡೆದುಕೊಳ್ಳುವುದೇ ಇರುವುದನ್ನು ತಪ್ಪಿಸಲು 15-18 ವರ್ಷದ ಮಕ್ಕಳಿಗೆ ಶಾಲೆ ಹಾಗೂ ಕಾಲೇಜುಗಳಲ್ಲಿಯೇ ಲಸಿಕೆ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಈ ಕುರಿತು ಶಿಕ್ಷಣ ಇಲಾಖೆ, ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಮಾತನಾಡಿ, ಉದ್ದೇಶಿತ ಜನಸಂಖ್ಯೆಯ ಜನರನ್ನು ಆರಂಭದಲ್ಲಿ ಲಸಿಕೆ ಕೇಂದ್ರಗಳಿಗೆ ಕರೆಯಲಾಗುತ್ತದೆ. ಈ ವಯೋಮಾನದ ಜನರು ಮತ್ತು ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರ ಮಾಹಿತಿಗಳು ನಮ್ಮ ಬಳಿಯಿದೆ. ಲಸಿಕೆ ಕೇಂದ್ರಗಳ ಹೊರತಾಗಿ ಫಲಾನುಭವಿಗಳ ವಯಸ್ಸು ಮತ್ತು ರೋಗಗಳ ಆಧಾರದ ಮೇಲೆ ಬೂಸ್ಟರ್ ಡೋಸ್‌ಗಳನ್ನು ಅವರ ಮನೆ ಬಾಗಿಲಿಗೇ ತೆರಳಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರವು ಶೇಕಡಾ 100 ರಷ್ಟು ಲಸಿಕೆ ಗುರಿ ಸಾಧಿಸಿದೆ, ಆದರೆ ಇಡೀ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಿತಿಯಲ್ಲಿ ಕೆಲವು ಹಳ್ಳಿಗಳೂ ಇಲ್ಲಿ ಸೇರ್ಪಡೆಗೊಂಡಿದೆ. ಮನೆ ಮನೆಗೆ ತೆರಳಿ ಲಸಿಕೆ ಹಾಕುವ ಕಾರ್ಯವನ್ನು ಚುರುಕಿನಿಂದ ನಡೆಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ, ಜನರು ಮುಂದೆ ಬಂದು ಲಸಿಕೆಯನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ನಡುವೆ ಶಾಲಾ-ಕಾಲೇಜುಗಳಲ್ಲಿ ಹದಿಹರೆಯದವರಿಗೆ ಲಸಿಕೆ ಹಾಕುವ ಕುರಿತ ಮುಖ್ಯಮಂತ್ರಿಗಳ ಹೇಳಿಕೆಯನ್ನು ಸರ್ಕಾರದೊಂದಿಗೆ ಕೆಲಸ ಮಾಡುತ್ತಿರುವ ಮಕ್ಕಳ ಸಂಘವು ಬೆಂಬಲಿಸಿದೆ ಎಂದು ಸಂಘದ ಸದಸ್ಯರೊಬ್ಬರು ಹೇಳಿದ್ದಾರೆ.

ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಹೋಗುವ 15-18 ವರ್ಷದ ಮಕ್ಕಳ ಬಗ್ಗೆ ಶಿಕ್ಷಣ ಸಂಸ್ಥೆಗಳು ಸಂಪೂರ್ಣ ಮಾಹಿತಿಯನ್ನು ಹೊಂದಿರುತ್ತವೆ, ಹೀಗಾಗಿ ಅವರಿಗೆ ಲಸಿಕೆ ಹಾಕುವುದು ಸವಾಲಾಗುವುದಿಲ್ಲ. ಶಾಲೆಗಳಲ್ಲಿ ಲಸಿಕಾ ಕೇಂದ್ರಗಳ ತೆರೆಯಲು ಶಾಲಗಳು ಉತ್ಸುಕವಾಗಿವೆ. ಹೀಗಾಗಿ ಮಕ್ಕಳ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುವುದು, ಸುವ್ಯವಸ್ಥಿತ ರೀತಿಯಲ್ಲಿ ಲಸಿಕೆ ಹಾಕುವ ಕಾರ್ಯವನ್ನು ಮಾಡಬಹುದಾಗಿದೆ.

error: Content is protected !!