ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಂಪೂರ್ಣ ಸದ್ಬಳಕೆ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಸೂಚನೆ

ತುಮಕೂರು: ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಿಗೆ ಮಂಜೂರಾದ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ಸಂಪೂರ್ಣವಾಗಿ ಸದ್ಬಳಕೆ ಮಾಡಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಎಸ್‌ಸಿಪಿ ಹಾಗೂ ಟಿಎಸ್‌ಪಿ ಮೇಲ್ವಿಚಾರಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾರ್ಚ್ ಅಂತ್ಯದೊಳಗೆ ಸರ್ಕಾರದಿಂದ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಸಮಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ನಿರ್ದೇಶಿಸಿದರು.

ಕಡಿಮೆ ಅನುದಾನವನ್ನು ಖರ್ಚು ಮಾಡಿರುವ ಇಲಾಖೆಗಳು ಈ ಯೋಜನೆ ಬಗ್ಗೆ ಹೆಚ್ಚು ಗಮನಹರಿಸಿ ಅನುದಾನ ಸರ್ಕಾರಕ್ಕೆ ವಾಪಸಾಗದಂತೆ ಸದ್ಬಳಕೆ ಮಾಡಿ, ಶೇ. 100 % ಗುರಿ ಸಾಧನೆ ಮಾಡಬೇಕು. ಫೆಬ್ರವರಿ ಮಾಹೆಯ ಅಂತ್ಯಕ್ಕೆ ಗುರಿ ಸಾಧಿಸದ ಇಲಾಖೆಗಳಿಗೆ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಹಾನಗರ ಪಾಲಿಕೆ, ಮೀನುಗಾರಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪ್ರವಾಸೋದ್ಯಮ, ಬೆಸ್ಕಾಂ ಸೇರಿದಂತೆ ಎಲ್ಲಾ ಇಲಾಖೆಗಳು ಅನುದಾನವನ್ನು ಸದ್ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!