ಉಚಿತ ಹೊಲಿಗೆ ಮತ್ತು ಕಸೂತಿ ತರಬೇತಿಗಾಗಿ ಅರ್ಜಿ ಆಹ್ವಾನ

ತುಮಕೂರು: ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ (CMKKY) ಅಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಅಪರೇಲ್ ಟ್ರೈನಿಂಗ್ ಅಂಡ್ ಡಿಸೈನ್ ಸೆಂಟರ್ ಸಹಭಾಗಿತ್ವದಲ್ಲಿ ಎರಡು ತಿಂಗಳ ಉಚಿತ ಹೊಲಿಗೆ ಮತ್ತು ಕಸೂತಿ (Sewing Machine Operator & Hand Embroidery) ತರಬೇತಿಗಾಗಿ ಅರ್ಹ ಯುವತಿ/ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು 5 ನೇ ತರಗತಿ ಉತ್ತೀರ್ಣರಾಗಿದ್ದು, 18 ರಿಂದ 35 ವರ್ಷದ ವಯೋಮಾನದವರಾಗಿರಬೇಕು. ತುಮಕೂರು ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಹ ಅಭ್ಯರ್ಥಿಗಳು ಎ.ಟಿ.ಡಿ.ಸಿ. ತುಮಕೂರು, ಸಿದ್ದರಾಮಣ್ಣ ಹಾಸ್ಟಲ್ ಕಾಂಪೌಂಡ್, ಕೆಎಸ್‌ಆರ್‌ಟಿ ಬಸ್ ನಿಲ್ದಾಣದ ಎದುರು, ತುಮಕೂರು ವಿಳಾಸಕ್ಕೆ ಖುದ್ದಾಗಿ ಮೂಲ ದಾಖಲಾತಿಗಳು ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಮಾರ್ಚ್ 24 ರೊಳಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816-2251618 ಅಥವಾ ಮೊಬೈಲ್: 9844077096 ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!