ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶುಭಾಪೂಂಜ

ಉಡುಪಿ:ಸ್ಯಾಂಡಲ್ ವುಡ್ ನಟಿ ಶುಭಾಪೂಂಜ ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಬುಧವಾರ ಉಡುಪಿ ಹತ್ತಿರದ ಮಜಲಬೆಟ್ಟು ಬೀಡುವಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಈ ವಿಚಾರವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡ ಶುಭಾಪೂಂಜ ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ ಎಂದು ಹೇಳುವ ಮೂಲಕ ವಿವಾಹ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಇವರ ವಿವಾಹಕ್ಕೆ ಬಿಗ್‍ಬಾಸ್ ಎಂಟರ ವಿಜೇತ ಮಂಜು ಪಾವಗಡ ಸಾಕ್ಷಿಯಾಗಿದ್ದು, ನಿಮ್ಮಿಬ್ಬರ ದಾಂಪತ್ಯ ಜೀವನಕ್ಕೆ ಶುಭ ಹಾರೈಸುತ್ತೇನೆ ಎಂದಿದ್ದಾರೆ. ಶುಭಾಪೂಂಜ ಬಿಗ್‍ಬಾಸ್ ನಂತರ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದು, ಸಿನಿಮಾ ನಿರ್ಮಾಣದತ್ತ ಒಲವು ತೋರಿದ್ದಾರೆ.

error: Content is protected !!