ತಿಪಟೂರು: ಶಕ್ತಿ ದೇವತೆ ಕೆಂಪಮ್ಮ ದೇವಿಗೆ ವಾಮಾಚಾರ ಮಾಡಿದ ಕಿಡಿಗೇಡಿಗಳು ದೇವಾಲಯದ ಬಾಗಿಲಿಗೆ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹಟ್ನಾ ಗ್ರಾಮದಲ್ಲಿ ನಡದಿದೆ.
ಸುಪ್ರಸಿದ್ದ ಹಟ್ನಾ ಗ್ರಾಮದ ಗ್ರಾಮ ದೇವತೆ ಕೆಂಪಮ್ಮ ದೇವಿಗೆ ಸುತ್ತ ಮುತ್ತ 33 ಹಳ್ಳಿ ಜನರು ಆರಾಧಿಸುತ್ತಾರೆ. ಇಂತಹ ಶಕ್ತಿ ದೇವತೆಗೆ ಕಿಡಿಗೇಡಿಗಳು ವಾಮಾಚಾರ ಮಾಡಿ, ಬಳಿಕ ದೇವಾಲದಯ ಭಾಗಿಲಿಗೆ ಬೆಂಕಿ ಹಚ್ಚಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಇಂದು ಮುಂಜಾನೆ ಪೂಜೆ ಸಲ್ಲಿಸಲು ಪೂಜಾರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಘಟನೆಯಿಂದ ಬೆಚ್ಚಿಬಿದ್ದಿರುವ ಭಕ್ತಾಧಿಗಳು, ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.ತಿಪಟೂರಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.