ವೈಧ್ಯಕೀಯ ಶಿಕ್ಷಣದಲ್ಲಿ ಎನ್ಎಂಸಿ ಯಿಂದ ಪಾರದರ್ಶಕತೆ: ಪ್ರಧಾನಿ ಮೋದಿ

ಚೆನ್ನೈ: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗವು (ಎನ್ಎಂಸಿ)ಬಹಳಷ್ಟು ಪಾರದರ್ಶಕತೆಯನ್ನು ತರುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.

ಇಲ್ಲಿನ ತಮಿಳುನಾಡು ಡಾ.ಎಂ.ಜಿ.ಆರ್ ವೈದ್ಯಕೀಯ ವಿಶ್ವವಿದ್ಯಾಲಯದ 33 ನೇ ಘಟಿಕೋತ್ಸವವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಅವರು ಮಾತನಾಡಿದರು.

ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಪರಿವರ್ತನೆ ತರಲು ಸರ್ಕಾರ ಶ್ರಮಿಸುತ್ತಿದೆ. ಇದರ ಭಾಗವಾಗಿ ಅಸ್ತಿತ್ವಕ್ಕೆ ತರಲಾಗಿರುವ ಆಯೋಗವು ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ, ಉತ್ತಮ ಮಾನವ ಸಂಪನ್ಮೂಲ ಲಭ್ಯವಾಗುವಂತೆ ಮಾಡುವುದು’ ಎಂದು ಹೇಳಿದರು.

ಕಳೆದ ಆರು ವರ್ಷಗಳ ಅವಧಿಯಲ್ಲಿ 30000 ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲಾಗಿದೆ. ಇದು 2014 ರಲ್ಲಿದ್ದ ಸೀಟುಗಳ ಸಂಖ್ಯೆಯಲ್ಲಿ ಶೇ 50 ರಷ್ಟು ಹೆಚ್ಚಳ ಮಾಡಿದಂತಾಗಿದೆ ಎಂದೂ ಹೇಳಿದರು.

error: Content is protected !!