ತುಮಕೂರು ಜಿಲ್ಲಾ ಬಿಜೆಪಿಗೆ ಇಬ್ಬರು ಅಧ್ಯಕ್ಷರು: ಸಂಘಟನೆ ಒತ್ತು ಕೊಟ್ಟ ರಾಜ್ಯಾಧ್ಯಕ್ಷರು

ತುಮಕೂರು: ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಏಕಕಾಲಕ್ಕೆ ಇಬ್ಬರು ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಸುರೇಶ್ ಗೌಡ ರಾಜೀನಾಮೆ ನೀಡಿದ ನಂತರ ಖಾಲಿಯಿದ್ದ ಸ್ಥಾನಕ್ಕೆ ತಿಗಳ ಸಮುದಾಯದ ಲಕ್ಷ್ಮೀಶ್, ಕುರುಬ ಸಮುದಾಯದ ಬಿ.ಕೆ.ಮಂಜುನಾಥ್ ಅವರನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿಗೆ ಇಬ್ಬರನ್ನು ಅಧ್ಯಕ್ಷ ಗಾದಿಗೆ ಕೂರಿಸಲಾಗಿದೆ.

ಲಕ್ಷ್ಮೀಶ್ ಅವರಿಗೆ 7 ತಾಲೂಕುಗಳಾದ ತುಮಕೂರು ನಗರ, ಗ್ರಾಮಾಂತರ, ಕುಣಿಗಲ್, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ ತಾಲೂಕಿನ ಜವಾಬ್ದಾರಿ ವಹಿಸಲಾಗಿದೆ. ಮಧುಗಿರಿ, ಕೊರಟಗೆರೆ, ಶಿರಾ, ಪಾವಗಡ 4 ತಾಲೂಕಿನ ಉಸ್ತುವಾರಿಯನ್ನು ಬಿ.ಕೆ.ಮಂಜುನಾಥ್ ಹೆಗಲಿಗೆ ನೀಡಲಾಗಿದೆ.

ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿರುವ ಲಕ್ಷ್ಮೀಶ್ ಅವರು ಅಧ್ಯಕ್ಷ ಗಾದಿಯ ಮೇಲೆ ಬಹಳ ದಿನಗಳಿಂದ ಕಣ್ಣಿಟ್ಟಿದ್ದರು. ಶಿರಾ ಭಾಗದಲ್ಲಿ ಬಿಜೆಪಿ ಯನ್ನು ಸಂಘಟಿಸುತ್ತಿರುವ ಮಂಜುನಾಥ್ ಅವರಿಗೆ ಬಯಸದೆ ಅಧ್ಯಕ್ಷ ಹುದ್ದೆ ಒಲಿದಿದೆ.

error: Content is protected !!