ವೈಷ್ಣೋದೇವಿ ದುರಂತ.. ಪ್ರಧಾನಿ ದುಃಖ

ನವದೆಹಲಿ, ಜ1: ಜಮ್ಮುವಿನ ಮಾತಾ ವೈಷ್ಣೋದೇವಿ ಭವನದಲ್ಲಿಂದು ಬೆಳಗಿನಜಾವ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಗೊಂಡವರು ತ್ವರಿತವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ೨ ಲಕ್ಷ ರೂಪಾಯಿ, ಗಾಯಗೊಂಡವರಿಗೆ ೫೦ ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ಪ್ರಕಟಿಸಿದ್ದಾರೆ. ಘಟನೆ ಸಂಬಂಧ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗೌರ‍್ನರ್ ಮನೋಜ್ ಸಿನ್ಹಾ ಅವರೊಂದಿಗೆ ಪ್ರಧಾನಿ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪರಿಸ್ಥಿತಿಯ ಪರಾಮರ್ಶೆ ನಡೆಸುತ್ತಿದ್ದಾರೆ.

error: Content is protected !!