ವರದಿ: ರಮೇಶ್ ಗೌಡ, ಗುಬ್ಬಿ.
ಗುಬ್ಬಿ: ನಿರಂತರ ಸುರಿದ ಮಳೆಗೆ ಕುಸಿದ ಮನೆ ಗೋಡೆಯ ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ಧಾರುಣ ಘಟನೆ ಬುಧವಾರ ಬೆಳಿಗ್ಗೆ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ತೋಟದ ಮನೆಯ ನಿವಾಸಿ ಸಹನಾ(27) ಮೃತಪಟ್ಟ ದುರ್ದೈವಿ. ಬೆಳಿಗ್ಗೆ ಸ್ನಾನಕ್ಕೆ ಹಳೇ ಮನೆಗೆ ತೆರಳಿದ ಸಹನಾ ಗೋಡೆ ಕುಸಿದು ಮಣ್ಣಿನಡಿ ಸಿಲುಕಿದರು. ಪ್ರಜ್ಞೆ ತಪ್ಪಿರುವ ಸಾಧ್ಯತೆ ಇದೆ ಎಂದು ಕೂಡಲೇ ಗ್ರಾಮಸ್ಥರು ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಜವರಾಯ ಗೋಡೆ ರೂಪದಲ್ಲಿ ಬಂದು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.
ಕಳೆದ ಒಂದು ತಿಂಗಳಿಂದ ಸುರಿದ ಬಾರಿ ಮಳೆಗೆ ಮನೆಗಳು ಕುಸಿದ ಘಟನೆ ನಡೆಯುತಿತ್ತು. ಜಿ.ಹೊಸಹಳ್ಳಿ ಗ್ರಾಮದಲ್ಲಿ ಮಳೆಗೆ ಓರ್ವ ಮಹಿಳೆ ಬಲಿಯಾದ ಘಟನೆ ನಡೆದಿದೆ. ಮಳೆಗಾಲದಲ್ಲಿ ಹಳೇ ಮನೆಯನ್ನು ತೊರೆಯುವುದು ಸೂಕ್ತ ಎಂದು ಗ್ರಾಮಸ್ಥರು ಮಾತನಾಡುತ್ತಿದ್ದಾರೆ.
ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.